ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 27/01/2021
ಶೋರಾಪುರ ಪೊಲೀಸ್ ಠಾಣೆ ಗುನ್ನೆ ನಂ:- 25/2021 ಕಲಂ: 78 (3) ಕೆ.ಪಿ. ಕಾಯ್ದೆ : ಇಂದು ದಿನಾಂಕ: 27/01/2021 ರಂದು 7:10 ಪಿ.ಎಮ್. ಕ್ಕೆ ಠಾಣೆಯ ಎಸ್.ಹೆಚ್.ಡಿ. ಕರ್ತವ್ಯದಲ್ಲಿದ್ದಾಗ ಶ್ರೀ ಸಾಹೇಬಗೌಡ ಎಮ್ ಪಾಟೀಲ ಪಿಐ ಸಾಹೇಬರು ಒಬ್ಬ ಆರೋಪಿತನೊಂದಿಗೆ ಜಪ್ತಿ ಪಂಚನಾಮೆ ಹಾಗೂ ಮುದ್ದೆಮಾಲು ಹಾಜರಪಡಿಸಿ ವರದಿ ನೀಡಿದ್ದು, ಸಾರಾಂಶವೆನೆಂದರೆ, ಇಂದು ದಿನಾಂಕ:27/01/2021 ರಂದು 4:15 ಪಿ.ಎಮ್ ಸುಮಾರಿಗೆ ನಾನು ಠಾಣೆಯಲ್ಲಿದ್ದಾಗ ಖಚಿತವಾದ ಮಾಹಿತಿ ಬಂದಿದ್ದೆನೆಂದರೆ ಸುರಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಸುರಪೂರ ನಗರದ ಪಾಂಡುರಂಗ ಗುಡಿಯ ಹತ್ತಿರ ಸಾರ್ವಜನಿಕ ರಸ್ತೆಯಲ್ಲಿ ಯಾರೋ ಒಬ್ಬ ವ್ಯಕ್ತಿಯು ಜನರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಸಿಬ್ಬಂದಿಯವರಾದ 1) ಶ್ರೀ ಮಂಜುನಾಥ ಹೆಚ್ಸಿ-176 2) ಶ್ರೀ ಮಂಜುನಾಥ ಸಿಪಿಸಿ-271 ಮತ್ತು 3) ಜೀಪ್ ಚಾಲಕ ಶ್ರೀ ಮಹಾಂತೇಶ ಎಪಿಸಿ-48 ಇವರಿಗೆ ವಿಷಯ ತಿಳಿಸಿ ಮಂಜುನಾಥ ಹೆಚ್ಸಿ- 176 ಇವರಿಗೆ ಪಂಚರನ್ನು ಕರೆತರಲು ಹೇಳಿದ ಪ್ರಕಾರ ಸದರಿ ಹೆಚ್ಸಿ ರವರು ಇಬ್ಬರು ಪಂಚರಾದ 1) ಶ್ರೀ ನಿಂಗಪ್ಪ ತಂದೆ ಮಲ್ಲಪ್ಪ ಗೋಡಿಹಾಳ ವಯಾ:43 ವರ್ಷ ಜಾ:ಉಪ್ಪಾರ ಉ:ಒಕ್ಕಲುತನ ಸಾ:ಕನ್ನಳ್ಳಿ ತಾ:ಸುರಪೂರ 2) ಶ್ರೀ ಮಲ್ಕಪ್ಪ ತಂದೆ ಬಸಪ್ಪ ಬಾಕಲಿ ವಯಾ:48 ವರ್ಷ ಜಾ:ಬೇಡರ ಉ:ಒಕ್ಕಲುತನ ಸಾ:ಕನ್ನಳ್ಳಿ ತಾ:ಸುರಪೂರ ಇವರನ್ನು 4:45 ಪಿ.ಎಂ ಕ್ಕೆ ಠಾಣೆಗೆ ಕರೆದುಕೊಂಡು ಬಂದಿದ್ದು, ಸದರಿಯವರಿಗೆ ವಿಷಯವನ್ನು ತಿಳಿಸಿ, ದಾಳಿ ಕಾಲಕ್ಕೆ ನಮ್ಮೊಂದಿಗೆ ಹಾಜರಿದ್ದು ಪಂಚರಾಗಲು ಸಹಕರಿಸಿ ಅಂತಾ ಕೇಳಿದ್ದಕ್ಕೆ ಅವರು ಅದಕ್ಕೆ ಒಪ್ಪಿಕೊಂಡಿದ್ದು ಸದರಿ ಪಂಚರು ಮತ್ತು ಮೇಲ್ಕಂಡ ಠಾಣೆಯ ಸಿಬ್ಬಂದಿಯವರೊಂದಿಗೆ 5 ಪಿ.ಎಮ್ ಕ್ಕೆ ಠಾಣೆಯ ಜೀಪ್ ನಂ.ಕೆಎ-33, ಜಿ-0238 ನೇದ್ದರಲ್ಲಿ ಹೊರಟು 5:20 ಪಿ.ಎಮ್ ಕ್ಕೆ ಸುರಪೂರ ನಗರದ ಪಾಂಡುರಂಗ ಗುಡಿಯ ಹತ್ತಿರ ಹೋಗಿ ಸ್ವಲ್ಪ ಮರೆಯಾಗಿ ಜೀಪ್ ನಿಲ್ಲಿಸಿ ಎಲ್ಲರೂ ಕೆಳಗೆ ಇಳಿದು ನಿಂತು ನೋಡಲು ಪಾಂಡುರಂಗ ಗುಡಿಯ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಒಬ್ಬ ವ್ಯಕ್ತಿಯು ನಿಂತುಕೊಂಡು ಒಂದು ರೂಪಾಯಿಗೆ 80 ರೂಪಾಯಿ ಗೆಲ್ಲಿರಿ, ಮಟಕಾ ನಂಬರ ಬರೆಯಿಸಿ ಅದೃಷ್ಟವಂತರಾಗಿರಿ ಅಂತ ಹೋಗಿ ಬರುವ ಜನರಿಗೆ ಕೂಗಿ ಕರೆಯುತ್ತಾ ಜನರಿಂದ ಹಣ ಪಡೆದು, ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದನ್ನು ಖಚಿತಪಡಿಸಿಕೊಂಡು, ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 5:25 ಪಿ.ಎಮ್ ಕ್ಕೆ ದಾಳಿ ಮಾಡಿ ಹಿಡಿದು ಅವನ ಅಂಗಶೋಧನೆ ಮಾಡಿ ಹೆಸರು ವಿಳಾಸ ವಿಚಾರಿಸಲಾಗಿ ತನ್ನ ಹೆಸರು ಯಮನಪ್ಪ ತಂದೆ ಮಲ್ಲಪ್ಪ ಹಂಗರಗಿ ವಯಾ:35 ವರ್ಷ ಜಾ:ಉಪ್ಪಾರ ಉ:ಒಕ್ಕಲುತನ ಸಾ:ಕನ್ನಳ್ಳಿ ತಾ:ಸುರಪೂರ ಅಂತಾ ತಿಳಿಸಿದ್ದು, ಸದರಿಯವನು ತಾನು ಮಟಕಾ ನಂಬರ ಬರೆದುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಳ್ಳುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದು, ಸದರಿಯವನ ಅಂಗಶೋಧನೆ ಮಾಡಲಾಗಿ ಸದರಿಯವರ ಹತ್ತಿರ ನಗದು ಹಣ 4150=00 ರೂಗಳು, ಒಂದು ಮಟಕಾ ನಂಬರ್ ಬರೆದ ಚೀಟಿ ಅ.ಕಿ.00=00, ಒಂದು ಬಾಲ್ ಪೆನ್ ಅ.ಕಿ 00=00, ನೇದ್ದವುಗಳು ದೊರೆತಿದ್ದು ಅವುಗಳನ್ನು ಕೇಸಿನ ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡು, ಸದರಿ ಜಪ್ತಿ ಪಂಚನಾಮೆಯನ್ನು 5:25 ಪಿ.ಎಮ್ ದಿಂದ 6-25 ಪಿ.ಎಮ್ದ ವರೆಗೆ ಬರೆದುಕೊಂಡು, ಮರಳಿ ಠಾಣೆಗೆ ಬಂದು ಸದರಿ ಜಪ್ತಿ ಪಂಚನಾಮೆ ಮತ್ತು ಆರೋಪಿತನೊಂದಿಗೆ ಮುದ್ದೆಮಾಲನ್ನು ಹಾಜರುಪಡಿಸುತ್ತಿದ್ದು ಆರೋಪಿತನ ವಿರುದ್ಧ ಸೂಕ್ತ ಕಾನೂನಿನ ಕ್ರಮ ಜರುಗಿಸಲು ಈ ವರದಿಯೊಂದಿಗೆ ಆದೇಶ ನೀಡಿದ್ದರ ಮೇಲಿಂದ ಠಾಣೆ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
ಕೆಂಭಾವಿ ಪೊಲೀಸ್ ಠಾಣೆ ಗುನ್ನೆ ನಂ :- ಗುನ್ನೆ ನಂ 11/2021 ಕಲಂ: 78(3) ಕೆಪಿ ಯಾಕ್ಟ: ;- ಶ್ರೀ ಸುದರ್ಶನರೆಡ್ಡಿ ಪಿಎಸ್ಐ [ಕಾ.ಸು] ರವರು ಠಾಣೆಗೆ ಹಾಜರಾಗಿ ವರದಿ ಸಲ್ಲಿಸಿದ್ದೆನೆಂದರೆ, ಇಂದು ದಿನಾಂಕ: 27.01.2021 ರಂದು 4.00 ಪಿಎಮ್ ಸುಮಾರಿಗೆ ಠಾಣೆಯಲ್ಲಿದ್ದಾಗ ಎಮ್ ಬೊಮನಳ್ಳಿ ಗ್ರಾಮದ ಹನುಮಾನ ದೇವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಸಾರ್ವಜನಿಕರಿಗೆ ಕರೆಯುತ್ತ ಬರ್ರಿ ಬರ್ರಿ ಬಾಂಬೆ ಮಟಕಾ ಇದೆ ಕಲ್ಯಾಣ ಮಟಕಾ ಇದೆ ಒಂದು ರೂಪಾಯಿಗೆ ಎಂಬತ್ತು ರೂಪಾಯಿ ಬರುತ್ತದೆ ಬಂದು ನಿಮ್ಮ ಅದೃಷ್ಟದ ನಂಬರ ಬರೆಯಿಸಿರಿ ಅಂತಾ ಕರೆದು ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತ ಬಾತ್ಮಿ ಬಂದ ಮೇರೆಗೆ 1) ಶಂಕರಗೌಡ ಹೆಚ್ಸಿ-33 2) ಪೆದ್ದಪ್ಪಗೌಡ ಪಿಸಿ-214 ರವರನ್ನು ಕರೆದು ಸದರಿ ವಿಷಯ ತಿಳಿಸಿ ಶಂಕರಗೌಡ ಹೆಚ್ಸಿ 33 ರವರಿಂದ ಇಬ್ಬರು ಪಂಚರಾದ 1) ಶ್ರೀ ಮಡಿವಾಳಪ್ಪ ತಂದೆ ಕೆಂಚಪ್ಪ ದೊಡಮನಿ ವ|| 37 ಜಾ|| ಪರಿಶಿಷ್ಟ ಜಾತಿ ಉ|| ಕೂಲಿ ಸಾ|| ಕೆಂಭಾವಿ 2) ಮಕ್ತುಮ ತಂದೆ ಮಾಸುಮಸಾಬ ವಡಕೇರಿ ವ|| 36 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಇವರನ್ನು ಠಾಣೆಗೆ ಕರೆಯಿಸಿ ಅವರಿಗೂ ಸಹ ಬಾತ್ಮಿ ವಿಷಯ ತಿಳಿಸಿ ಸಿಬ್ಬಂದಿ ಹಾಗೂ ಪಂಚರೊಂದಿಗೆ ಠಾಣೆಯಿಂದ 04.15 ಪಿ.ಎಮ್ಕ್ಕೆ ಹೊರಟು 04.50 ಪಿ.ಎಮ್ಕ್ಕೆ ಎಮ್ ಬೊಮನಳ್ಳಿ ಗ್ರಾಮದ ಹನುಮಾನ ದೇವರ ಗುಡಿಯ ಹತ್ತಿರ ಮರೆಯಾಗಿ ನಿಂತು ನೋಡಲಾಗಿ ಅಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ ಕರೆದು ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದುದನ್ನು ನೋಡಿ ಖಚಿತಪಡಿಸಿಕೊಂಡು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 4.55 ಪಿಎಮ್ಕ್ಕೆ ದಾಳಿ ಮಾಡಿದ್ದು ದಾಳಿಯಲ್ಲಿ ಒಬ್ಬ ವ್ಯಕ್ತಿ ಸಿಕ್ಕಿದ್ದು ಅವನ ಹೆಸರು ವಿಳಾಸ ವಿಚಾರಿಸಲಾಗಿ ಗುತ್ತಪ್ಪ ತಂದೆ ಯಮನಪ್ಪ ನಾಯ್ಕೋಡಿ ವ|| 65 ಜಾ|| ಹಿಂದೂ ಕಬ್ಬಲಿಗ ಉ|| ಕೂಲಿ ಕೆಲಸ ಸಾ|| ಯಕ್ತಾಪೂರ ತಾ|| ಸುರಪುರ ಅಂತ ತಿಳಿಸಿದ್ದು ಸದರಿಯವನಿಗೆ ಅಂಗಶೋಧನೆ ಮಾಡಲಾಗಿ ನಗದು ಹಣ 2530/- ರೂಪಾಯಿ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ ಪೆನ್ನು ಸಿಕ್ಕಿದ್ದು ಇವುಗಳನ್ನು 4.55 ಪಿ.ಎಮ್ದಿಂದ 5.55 ಪಿ.ಎಮ್ ದವರೆಗೆ ಪಂಚರ ಸಮಕ್ಷಮ ವಶಪಡಿಸಿಕೊಂಡೆನು. ನಂತರ ಸದರಿ ಆರೋಪಿತನಿಗೆ ತಾನು ಬರೆದುಕೊಂಡ ನಂಬರ ಯಾರಿಗೆ ಕೊಡುತ್ತಿ ಅಂತ ವಿಚಾರಿಸಿ ಕೇಳಿ ತಿಳಿಯಲಾಗಿ ಹೊಸಕೇರಿ ಗ್ರಾಮದ ಮಲ್ಲಿಕಾಜರ್ುನ ಎಂಬುವವರಿಗೆ ಹಣ ಮತ್ತು ನಂಬರ ಕೊಡುವದಾಗಿ ತಿಳಿಸಿದ್ದು, ನಂತರ ಸದರಿ ಆರೋಪಿತನಿಗೆ ದಸ್ತಗಿರಿ ಮಾಡಿಕೊಂಡು ಮುದ್ದೆಮಾಲು ಸಮೇತ 6.30 ಪಿಎಮ್ಕ್ಕೆ ಠಾಣೆಗೆ ಬಂದಿದ್ದು ಸದರಿ ಆರೋಪಿತರ ವಿರುದ್ದ ಮುಂದಿನ ಕ್ರಮ ಜರುಗಿಸಲು ಆದೇಶಿಸಲಾಗಿದೆ ಅಂತ ವರದಿ ನೀಡಿದ್ದು, ಸದರಿ ವರದಿ ಆಧಾರದ ಮೇಲಿಂದ ಮಾನ್ಯ ನ್ಯಾಯಾಲಯದ ಪರವಾನಿಗೆ ಪಡೆದು 8.15 ಪಿಎಮ್ಕ್ಕೆ ಠಾಣಾ ಗುನ್ನೆ ನಂ 11/2021 ಕಲಂ: 78 (3) ಕೆಪಿ ಆಕ್ಟ ಪ್ರಕಾರ ಪ್ರಕರಣ ದಾಖಲಿಸಿ ತನಿಖೆ ಕೈಕೊಂಡೆನು.